ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದ್ದು, ವಾಣಿಜ್ಯ ವಿಭಾಗದಲ್ಲಿ ಮಹಮ್ಮದ್ ಲಾಜಿಮ್ 588 ಅಂಕ ಗಳಿಸಿ ಕಾಲೇಜಿಗೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ಪ್ರೇಕ್ಷ ಬಿ.ಸಿ ಯವರು 585 ಅಂಕಗಳಿಸಿ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಹಾಗೂ ಅರ್ಚನ ಜಯನ್ 582 ಅಂಕ ಗಳಿಸಿ ತಾಲೂಕಿಗೆ ತೃತೀಯ ಸ್ಥಾನಿ ಆಗಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ಕೀರ್ತನ ಸಿ.ವಿ ಅವರು 576 ಹಾಗೂ ಸೂರಜ್ ಜಿ ಆರ್ 572 ಅಂಕಗಳನ್ನು ಪಡೆದಿರುತ್ತಾರೆ.
ಒಟ್ಟು ವಾಣಿಜ್ಯ ವಿಭಾಗದಲ್ಲಿ 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ 33 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ.ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಕಾಲೇಜಿನ ಸಿ ಇ ಒ ಡಾ.ಉಜ್ವಲ್ ಯು ಜೆ, ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್, ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಶುಭಹಾರೈಸಿದರು .
